ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಶಿಕ್ಷಕರ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಖಂಡಿಸಿ ತಮಿಳುನಾಡಿನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
12ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಶಿಕ್ಷಕರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳು. ವಿದ್ಯಾರ್ಥಿನಿ ಆತ್ಮಹತ್ಯೆ ಖಂಡಿಸಿ ತಮಿಳುನಾಡಿನ ಕಲ್ಲಕುರಿಚಿಯಲ್ಲಿ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಉದ್ರಿಕ್ತಗೊಂಡ ವಿದ್ಯಾರ್ಥಿಗಳು ಬಸ್, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲ್ಲಕುರುಚಿ ಕಾಲೇಜಿಗೆ ನುಗ್ಗಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಾಲೇಜಿನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೇ ಕಾಲೇಜಿನ ಕಿಟಕಿ ಗಾಜುಗಳನ್ನು ಪುಡಿಗೈದಿದ್ದಿದ್ದಾರೆ. ಅಷ್ಟಕ್ಕೆ ನಿಲ್ಲದ ವಿದ್ಯಾರ್ಥಿಗಳು ಕಾಲೇಜಿಗೆ ಬೆಂಕಿ ಹಚ್ಚಿ, ವಿದ್ಯಾರ್ಥಿನಿ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದು, ಬಗ್ಗದ ವಿದ್ಯಾರ್ಥಿಗಳು ಈವರೆಗೆ ಒಟ್ಟು 15 ಕಾಲೇಜುಗಳಿಗೆ ಬೆಂಕಿ ಹಚ್ಚಿದ್ದು, 3 ಪೊಲೀಸ್ ವಾಹನ ಹಾಗೂ 7 ಬಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಹತ್ತು ಜನ ಪೊಲೀಸರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳ ಆಕ್ರೋಶಕ್ಕೆ ಇಡೀ ಕಲ್ಲಕುರುಚಿ ಹೊತ್ತಿ ಉರಿದಿದೆ.
ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ