Kannada NewsLatest

ಯಾವುದೇ ಗೊಂದಲವಿಲ್ಲದೆ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆಯಾಗಲಿ: ಶಾಸಕ ಅನಿಲ ಬೆನಕೆ

ಪ್ರಗತಿವಾಹಿನಿ ಸುದ್ದಿ,  ಬೆಳಗಾವಿ: ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯಡಿ ನಗರದ ಬಡಕಲ ಗಲ್ಲಿಯ ಶ್ರೀ  ಬನಶಂಕರಿ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಭಾಗ್ಯಲಕ್ಷ್ಮೀ ಬಾಂಡ್ ಗಳನ್ನು ಫಲಾನುಭವಿಗಳಿಗೆ ವಿತರಿಸಿದರು.

ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು, ಹೆಣ್ಣು ಮಕ್ಕಳ ಭದ್ರತೆ ಹಾಗೂ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವ ಮುಖ್ಯ ಉದ್ದೇಶದೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದೊಂದು ಉತ್ತಮ ಯೋಜನೆಯಾಗಿದ್ದು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕಳೆದ ಹಲವು ದಿನಗಳಿಂದ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆಗೆ ಚಿಂತನೆ ನಡೆದಿತ್ತು. ಅದರಂತೆ ನಗರದ ಬಡಕಲ ಗಲ್ಲಿ ಹಾಗೂ ಹನುಮಾನ ನಗರದಲ್ಲಿ  ಭಾಗ್ಯಲಕ್ಷ್ಮೀ ಬಾಂಡ್ ವಿತರಿಸಲಾಗುತ್ತಿದೆ. ನಂತರದಲ್ಲಿ ಬಸವನಕುಡಚಿ ಹಾಗೂ ಮಹಾಂತೇಶ ನಗರದಲ್ಲಿ ಭಾಗ್ಯಲಕ್ಷ್ಮೀ ಬಾಂಡ್‌ಗಳ ವಿತರಣೆ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.

ಫಲಾನುಭವಿಗಳಿಗೆ ಯಾವುದೇ ಗೊಂದಲಗಳು ಇಲ್ಲದೆ ಭಾಗ್ಯಲಕ್ಷ್ಮೀ ಬಾಂಡ್ ಗಳ ವಿತರಣೆ ಮಾಡಬೇಕು.  ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಒಟ್ಟು 5300 ಭಾಗ್ಯಲಕ್ಷ್ಮೀ ಭಾಂಡ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೆಣ್ಣು ಮಗುವಿಗೆ 18 ವರ್ಷ ತುಂಬಿದ ಬಳಿಕ ಅವರಖಾತೆಗೆ 1 ಲಕ್ಷ ರೂ. ಜಮೆಯಾಗುತ್ತದೆ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಯೋಜನೆ ಜಾರಿಗೊಳಿಸಲಾಗಿದೆ ಎಂದು ಅನಿಲ ಬೆನಕೆ  ಮಾಹಿತಿ ನೀಡಿದರು.

10-12 ನೇ ತರಗತಿಯ ಫಲಿತಾಂಶ ನೋಡಿದಾಗ ಶೇ.80ರಷ್ಟು ವಿದ್ಯಾರ್ಥಿನಿಯರು ಶೇ. 90 ಫಲಿತಾಂಶ  ಪಡೆದಿರುತ್ತಾರೆ.   ಐಎಎಸ್, ಐಪಿಎಸ್ ನಂತಹ ಉನ್ನತ ಹುದ್ದೆಗಳನ್ನು ಪಡೆಯುವಲ್ಲೂ ಇಂದಿನ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸುತ್ತಿದ್ದಾರೆ ಎಂದು ಹರ್ಷವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಕ್ಷ್ಮಣ ಭಜಂತ್ರಿ, ನಗರ ಸೇವಕರು, ಫಲಾನುಭವಿಗಳ ಪಾಲಕರು ಪೋಷಕರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

ಇನ್ಮುಂದೆ ಸರ್ಕಾರಿ ಇಲಾಖೆಯ ಪತ್ರ ವ್ಯವಹಾರ ಕನ್ನಡದಲ್ಲಿಯೇ ಇರಬೇಕು; ಡಾ.ಟಿ.ಎಸ್.ನಾಗಾಭರಣ ಖಡಕ್ ಸೂಚನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button