Latest

ವಿದ್ಯಾರ್ಥಿನಿ ಆತ್ಮಹತ್ಯೆ; ಇಬ್ಬರು ಶಿಕ್ಷಕಿಯರ ಬಂಧನ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕಿಯರನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನ ಕಲ್ಲಕುರುಚಿಯಲ್ಲಿ ನಡೆದಿದೆ.

ಶಿಕ್ಷಕರ ಕಿರುಕುಳ ಎಂದು ಡೆತ್ ನೋಟ್ ಬರೆದಿಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಳು. ವಿದ್ಯಾರ್ಥಿನಿ ಆತ್ಮಹತ್ಯೆ ಖಂಡಿಸಿ ವಿದ್ಯಾರ್ಥಿಗಳು ಕಲ್ಲಕುರುಚಿಯಲ್ಲಿ ಶಾಲೆ, ಬಸ್, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಇದೀಗ ಪೊಲೀಸರು ಇಬ್ಬರು ಶಿಕ್ಷಕಿಯರನ್ನು ಬಂಧಿಸಿದ್ದು, ಮೂವರು ಶಿಕ್ಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿದ್ಯಾರ್ಥಿನಿ ಸಾವಿಗೆ ಶಿಕ್ಷಕರ ಟಾರ್ಚರ್ ಕಾರಣ ಎಂಬ ಆರೋಪ ಕೇಳಿಬಂದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಅತಿಯಾದ ರಕ್ತಸ್ರಾವ ಹಾಗೂ ದೇಹದ ಮೇಲೆ ಗಾಯಗಳಾಗಿರುವುದು ಪತ್ತೆಯಾಗಿದೆ.

ವಿದ್ಯಾರ್ಥಿನಿಗೆ ಕಿರುಕುಳ ಹಿನ್ನೆಲೆಯಲ್ಲಿ ಕೆಮೆಸ್ಟ್ರಿ ವಿಭಾಗದ ಶಿಕ್ಷಕಿ ಹರಿಪ್ರಿಯಾ, ಗಣೀತ ಶಿಕ್ಷಕಿ ಕೃತ್ತಿಕಾ ಅವರನ್ನು ಬಂಧಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲರು, ಸಕ್ರೆಟರಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಡಿ.ಕೆ.ಶಿವಕುಮಾರ್ ಒಡೆತನದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button