
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಆರಂಭವಾಗಿದ್ದು, ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಖಚಿತ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಭಾರತದ 15ನೇ ರಾಷ್ಟ್ರಪತಿ ಆಯ್ಕೆಗಾಗಿ ಮತದಾನ ನಡೆಯುತ್ತಿದ್ದು, 4,800 ಚುನಾಯಿತ ಸಂಸದರು, ಶಾಸಕರು ಹಕ್ಕು ಚಲಾಯಿಸುತ್ತಿದ್ದಾರೆ. ಒಂದು ವೇಳೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾದರೆ ಭಾರತದ ಮೊದಲ ಬುಡಕಟ್ಟು ಮಹಿಳೆ ರಾಷ್ಟ್ರಪತಿ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿ ಹೊಸ ದಾಖಲೆ ಬರೆಯಲಿದ್ದಾರೆ.
ವಿಧಾನಸೌಧದಲ್ಲಿ ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಶಾಸಕರು ಒಗ್ಗಟ್ಟಿನಲ್ಲಿ ಬಂದು ಮತದಾನ ಮಾಡಿದರು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಷ್ಟ್ರಪತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಸಾಧಿಸುತ್ತಾರೆ. ನಮ್ಮ ಅಭ್ಯರ್ಥಿಯವರಿಗೆ ಹಲವು ಪ್ರಾದೇಶಿಕ ಪಕ್ಷದ ಬೆಂಬಲ ಕೂಡ ಇದೆ. ಬುಡಕಟ್ಟು ಸಮುದಾಯದ ಮಹಿಳೆ ಉನ್ನತ ಸ್ಥಾನಕ್ಕೆ ಏರಲಿದ್ದಾರೆ ಎಂದು ತಿಳಿಸಿದರು.
ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ