
ಪ್ರಗತಿವಾಹಿನಿ ಸುದ್ದಿ; ಕೋಲಾರ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರೊಬ್ಬರಿಗೆ ಎಸಿಬಿ ಅಧಿಕಾರಿಗಳ ಹೆಸರಲ್ಲಿ ಕರೆ ಮಾಡಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕುತ್ತಿದ್ದ ಮೂವರು ನಕಲಿ ಎಸಿಬಿ ಅಧಿಕಾರಿಗಳನ್ನು ಕೋಲಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕೋಲಾರದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ ಎಂಬುವವರಿಗೆ ತಾವು ಎಸಿಬಿ ಅಧಿಕಾರಿಗಳು ನಿಮ್ಮ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸುವುದಾಗಿ ಹೇಳಿ ಆರೋಪಿಗಳು ಬೆದರಿಕೆ ಹಾಕಿದ್ದರು. ಅಲ್ಲದೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.
ಅನುಮಾನಗೊಂಡ ನಾರಾಯಣಗೌಡ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೋಲಾರ ಪೊಲೀಸರು, ಎಸ್ ಪಿ ದೇವರಾಜ್ ಮಾರ್ಗದರ್ಶನದಂತೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಬಾಗಲಕೋಟೆಯಲ್ಲಿ ಮೂವರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಚಿಕ್ಕೋಡಿಯ ಸಾದಲಗ ಮೂಲದ ಮುರಿಗಪ್ಪ, ಸಕಲೇಶಪುರದ ರಜನಿಕಾಂತ್ ಹಾಗೂ ಮಾಹಾರಾಷ್ಟ್ರ ಕೊಲ್ಲಾಪುರ ಮೂಲದ ರಾಜೇಶ್ ಎಂದು ಗುರುತಿಸಲಾಗಿದೆ.
ಮಹತ್ವದ ವಿಚಾರವೆಂದರೆ ಚಿಕ್ಕೋಡಿ ಮೂಲದ ಆರೋಪಿ ಮುರಿಗಪ್ಪ 2008ರಲ್ಲಿ ಪೊಲೀಸ್ ಪೇದೆ ಹುದ್ದೆಯಿಂದ ವಜಾಗೊಂಡಿದ್ದ. ಮೂವರು ಆರೋಪಿಗಳ ವಿರುದ್ಧ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ವಿರುದ್ಧ ಬೆಳಗಾವಿಯಲ್ಲಿ FIR ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ