ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶೃಂಗೇರಿ ಶಾರದಾಂಬೆ ಪೀಠದ ಜಗದ್ಗುರುಗಳನ್ನು ಅವಮಾನ ಮಾಡಿದ್ದ ವ್ಯಕ್ತಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಶೃಂಗೇರಿ ನ್ಯಾಯಾಲಯ ತೀರ್ಪು ನೀಡಿದೆ.
ಶೃಂಗೇರಿ ಭಾರತಿತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಫೇಸ್ ಬುಕ್ ಕಮೆಂಟ್ ಹಾಕಿದ್ದ ಮುನ್ನಾ ಅಜರ್ ಎಂಬ ವ್ಯಕ್ತಿಗೆ ಶೃಂಗೇರಿ ಜೆ ಎಂ ಎಫ್ ಸಿ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಶೃಂಗೇರಿ ಹಿಂದೂಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ 2015 ನವೆಂಬರ್ 19 ರಂದು ಶೃಂಗೇರಿ ಶ್ರೀ ಮಠದ ಗುರುಪರಂಪರೆ ಕುರಿತು ಮಾಹಿತಿ ನೀಡುವ ಪೋಸ್ಟ್ ಹಾಕಲಾಗಿತ್ತು. ಅದರಲ್ಲಿ ಶೃಂಗೇರಿ ಶ್ರೀಗಳ ಫೋಟೋ ಕೂಡ ಇತ್ತು. ಮುನ್ನಾ ಅಜರ್ ಎಂಬ ಕಿಡಿಗೇಡಿ ಆ ಪೋಸ್ಟ್ ಗೆ ಅವಹೇಳನಕಾರಿ ಪದಗಳನ್ನು ಬಳಸಿ ಕಮೆಂಟ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಶೃಂಗೇರಿ ಮಠದವರು ಹಾಗೂ ಶ್ರೀಗಳ ಭಕ್ತ ವೃಂದ್ಧ ವ್ಯಕ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು. ಆರೋಪಿಗೆ ಶಿಕ್ಷೆಯಾಗಬೇಕು ಎಂದು ಶೃಂಗೇರಿ ಠಾಣೆಯಲ್ಲಿ ದೂರು ನೀಡಲಾಗಿತ್ತು.
ಶೃಂಗೇರಿ ಠಾಣೆಯ ವೃತ್ತ ನಿರೀಕ್ಷಕ ಸುಧೀರ್ ಎಂ ಹೆಗ್ಡೆ ನೇತೃತ್ವದ ಅಂಡ ಹುಬ್ಬಳ್ಳಿಯಲ್ಲಿ ಆರೋಪಿ ಮುನ್ನಾ ಅಜರ್ ನನ್ನು ಬಂಧಿಸಿತ್ತು. ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಇದೀಗ 7 ವರ್ಷಗಳ ಬಳಿಕ ಆರೋಪಿ ಮುನ್ನಾ ಅಜರ್ ಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬರ್ಬರ ಹತ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ