ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನೆಯಲ್ಲಿ ಆಚರಿಸಲಾಗುತ್ತಿರುವ ಸಿದ್ದರಾಮೋತ್ಸವದ ಬಗ್ಗೆ ಆಡಳಿತ ಪಕ್ಷದ ಸದಸ್ಯರು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಅಮೃತ ಮಹೋತ್ಸವ ಆಚರಣೆ ನಿಟ್ಟಿನಲ್ಲಿ ಸಿದ್ದರಾಮೋತ್ಸವ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಬಿ.ಸಿ.ಪಾಟೀಲ್, ಮನುಷ್ಯರು ಬದುಕಿದ್ದಾಗ ಯಾರಾದ್ರೂ ಉತ್ಸವ ಮಾಡ್ತಾರಾ? ಇದೆಂಥಹ ಹುಟ್ಟುಹಬ್ಬ ಆಚರಣೆ ಎಂದು ಕಿಡಿಕಾರಿದ್ದಾರೆ.
ನಾವು ದೇವರ ಉತ್ಸವ ಮಾಡುವುದನ್ನು ನೋಡಿದ್ದೇವೆ. ಮನುಷ್ಯ ಬದುಕಿದ್ದಾಗ ಉತ್ಸವ ಆಡುವುದನ್ನು ನೋಡಿಲ್ಲ, ಕೇಳಿಲ್ಲ. ಅದೂ ಕೂಡ ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ಜನರು ತೊಂದರೆಗೆ ಸಿಲುಕಿದ್ದಾರೆ. ಹಲವೆಡೆ ಪ್ರವಾಹ ಪರಿಸ್ಥಿತಿ ಬಂದಿದೆ. ಹೀಗಿರುವ ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ತಮ್ಮ ಹುಟ್ಟುಹಬ್ಬವನ್ನು ಉತ್ಸವದ ರೀತಿಯಲ್ಲಿ ಆಚರಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಹುಟ್ಟುಹಬ್ಬದ ಸಂಭ್ರಮದ ದಿನವೇ ದುರಂತ; ಈಜುಕೊಳಕ್ಕೆ ಬಿದ್ದು ಮಗು ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ