ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ದಾಖಲಾಗಿದ್ದ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡುವ ವಿವಾದಾತ್ಮಕ ಟ್ವೀಟ್ ಹಿನ್ನೆಲೆಯಲ್ಲಿ ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶದಲ್ಲಿ 6 ಎಫ್ ಐ ಆರ್ ದಾಖಲಾಗಿತ್ತು. ಅಲ್ಲದೇ ಪ್ರಕರಣ ಸಂಬಂಧ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದರು. ಜಾಮೀನು ನೀಡುವಂತೆ ಕೋರಿ ಹಾಗೂ ತಮ್ಮ ವಿರುದ್ಧದ ಎಲ್ಲಾ 6 ಪ್ರಕರಣಗಳನ್ನು ದೆಹಲಿಗೆ ವರ್ಗಾವಣೆ ಮಾಡುವಂತೆ ಕೋರಿ ಮೊಹಮ್ಮದ್ ಜುಬೇರ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಮೊಹಮ್ಮದ್ ಜುಬೇರ್ ಗೆ ಎಲ್ಲಾ ಪ್ರಕರಣಗಳಲ್ಲಿ ಜಾಮೀನು ನೀಡಿದ್ದು, ಅವರನ್ನು ಮಧ್ಯಂತರ ಜಾಮೀನಿನ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು. ಬಂಧನದ ಅವಧಿಯನ್ನು ಮಿತವಾಗಿ ಅನುಸರಿಸಬೇಕು. ಇದು ಕಾನೂನಿನ ಒಂದು ತತ್ವವಾಗಿದೆ. ಪ್ರಸ್ತಿತ ಪ್ರಕರಣದಲ್ಲಿ ಆರೋಪಿಯನ್ನು ನಿರಂತರ ಬಂಧನದಲ್ಲಿರಿಸಲು ಹಾಗೂ ಅಂತ್ಯವಿಲ್ಲದ ಶಿಕ್ಷೆಗೆ ಒಳಪಡಿಸುವುದು ಸಮರ್ಥವಲ್ಲ ಎಂದು ಅಭಿಪ್ರಾಯಪಟ್ಟಿದೆ.
ಅಲ್ಲದೇ 6 ಎಫ್ ಐ ಆರ್ ಗಳನ್ನು ಒಟ್ಟುಗೂಡಿಸಿ ಎಲ್ಲಾ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾಯಿಸುವಂತೆ ಸೂಚಿಸಿದೆ.
ಮನುಷ್ಯ ಬದುಕಿದ್ದಾಗ ಯಾರಾದ್ರೂ ಉತ್ಸವ ಮಾಡ್ತಾರಾ?; ಸಿದ್ದರಾಮೋತ್ಸವಕ್ಕೆ ತಿರುಗೇಟು ನೀಡಿದ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ