ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬರುವ ಆಗಸ್ಟ್ 12ಕ್ಕಿಂತ ಮೊದಲೇ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹೇಳಿದ್ದಾರೆ.
ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಮೇಯರ್, ಉಪಮೇಯರ್ ಚುನಾವಣೆ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಹಾಗೂ ಅಡ್ವೋಕೇಟ್ ಜನರಲ್ ಅವರ ಬಳಿ ಚರ್ಚಿಸಲಾಗಿದೆ. ಆಗಸ್ಟ್ ಮಾಸಾರಂಭದಲ್ಲಿ ಪ್ರಕ್ರಿಯೆಗಳು ಶುರುವಾಗಲಿದ್ದು ಆ.12ರೊಳಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಆ.15ರ ಸ್ವಾತಂತ್ರ್ಯ ದಿನಾಚರಣೆಗೆ ಪಾಲಿಕೆ ಮೇಲೆ ಬಿಜೆಪಿ ಮೇಯರ್ ಧ್ವಜಾರೋಹಣ ಮಾಡಲಿದ್ದಾರೆ ಎಂದರು.
ಮರಾಠಾ ಸಮುದಾಯದ ಬೇಡಿಕೆಗಳು ನಿಶ್ಚಿತವಾಗಿ ಈಡೇರಲಿವೆ ಎಂದು ಭರವಸೆ ವ್ಯಕ್ತಪಡಿಸಿದ ಅಭಯ ಪಾಟೀಲ, ಇತ್ತೀಚೆಗಷ್ಟೇ ಮರಾಠಾ ಮೀಸಲಾತಿ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಮರಾಠಾ ಸಮಾಜಕ್ಕೆ ಸುಗುವ ಸೌಲಭ್ಯಗಳನ್ನು ಒದಗಿಸಲು ಸರಕಾರ ಬದ್ಧವಿದೆ. ಹೆಚ್ಚುವರಿ ಅನುದಾನದ ನಿಟ್ಟಿನಲ್ಲಿ ಬೆಳಗಾವಿಯಿಂದ ನಿಯೋಗವೊಂದನ್ನು ತೆಗೆದುಕೊಂಡು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಹೇಳಿದರು.
ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ; ಅಧಿಕೃತ ಘೋಷಣೆ ಬಾಕಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ