ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳಪೆ ರಸ್ತೆ ಕಾಮಗಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿಯ ಇಬ್ಬರು ಎಂಜಿನಿಯರ್ ಗಳ ತಲೆದಂಡವಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ 23 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿ ನಿರ್ಮಿಸಲಾಗಿತ್ತು. ಪ್ರಧಾನಿ ಮೋದಿ ಸಂಚರಿಸುವ ಮಾರ್ಗಗಳಲ್ಲಿ ಡಾಂಬರೀಕರಣ ಮಾಡಲಾಗಿತ್ತು. ರಾಜ್ಯ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ವಾಪಸ್ಸಾಗುತ್ತಿದ್ದಂತೆ ಎರಡೇ ದಿನಕ್ಕೆ ರಸ್ತೆ ಡಾಂಬರೀಕರಣ ಸಂಪೂರ್ಣವಾಗಿ ಕಿತ್ತು ಬಂದಿತ್ತು. ಬಿಬಿಎಂಪಿ ಅಧಿಕಾರಿಗಳ ಕಳಪೆ ಕಾಮಗಾರಿಗೆ ಸಾರ್ವಜನಿಕರು ಆಕ್ರೋಶ ವ್ಯತಪಡಿಸಿದ್ದರು.
23 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟದ್ದಾಗಿದ್ದು, ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಗಳು ಕೆಳಿಬಂದಿತ್ತು. ಈ ಬಗ್ಗೆ ಪ್ರಧಾನಿ ಕಾರ್ಯಾಲಯದಿಂದಲೂ ಸೂಚನೆಗಳು ಬಂದಿದ್ದವು ಎನ್ನಲಾಗಿದೆ. ತನಿಖೆ ವೇಳೆ ರಸ್ತೆ ಪರಿಶೀಲನೆಯಲ್ಲಿ ಕಳಪೆ ಕಾಮಗಾರಿ ಸಾಬೀತಾಗಿದೆ.
40 ಎಂ.ಎಂ ಡಾಂಬರೀಕರಣ ಮಾಡಬೇಕಿದ್ದ ಜಾಗದಲ್ಲಿ 30ಎಂ ಎಂ ಡಾಂಬರೀಕರಣ ಮಾಡಿದ್ದು, ತನಿಖೆ ವೇಳೆ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎ.ರವಿ ಹಾಗೂ ಸಹಾಯಕ ಎಂಜಿನಿಯರ್ ವಿಶ್ವಾಸ್ ಐ.ಕೆ ಎಂಬುವವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಆಕಾಶ್ ಏರ್ ನೂತನ ವಿಮಾನ ಹಾರಾಟ; ಟಿಕೆಟ್ ಬುಕ್ಕಿಂಗ್ ಆರಂಭ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ