Latest

ರಾಜಕೀಯ ನಿವೃತ್ತಿ ವಿಚಾರ; ಸ್ಪಷ್ಟನೆ ನೀಡಿದ ಯಡಿಯೂರಪ್ಪ; ರಾಜಾಹುಲಿ ಮುಂದಿನ ನಡೆಯೇನು?

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಸ್ವಕ್ಷೇತ್ರ ಶಿಕಾರಿಪುರ ತಾಲೂಕನ್ನು ಮಗನಿಗೆ ಬಿಟ್ಟುಕೊಡುವ ಮೂಲಕ ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗುಡ್ ಬೈ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ವತ: ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದ ಯಡಿಯೂರಪ್ಪ ಇದೀಗ ತಮ್ಮ ಸ್ವಕ್ಷೇತ್ರವನ್ನು ತಮ್ಮ ಪುತ್ರ ಬಿ.ವೈ.ವಿಜಯೇಂದ್ರಗೆ ಬಿಟ್ಟುಕೊಡುವ ಮೂಲಕ ತಮ್ಮ ಕ್ಷೇತ್ರ ತ್ಯಾಗ ಮಾಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಬಿ.ಎಸ್.ವೈ ಇಂಥದ್ದೊಂದು ನಿರ್ಧಾರ ಪ್ರಕಟಿಸಿದರೆ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲಿ ಮೂಡಿತ್ತಿದೆ. ಈಬಗ್ಗೆ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಈ ಹಿಂದೆಯೇ ತೀರ್ಮಾನ ಮಾಡಿದ್ದೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಈ ಹಿಂದೆಯೆ ನಿರ್ಧರಿಸಿದ್ದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಲೇ ಮತ್ತೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ನಿರ್ಧರಿಸಿದ್ದೆ. ಕೇಂದ್ರ ಹಾಗೂ ರಾಜ್ಯ ನಾಯಕರು ಬಿ.ವೈ.ವಿಜಯೇಂದ್ರಗೆ ಅವಕಾಶ ಕೊಡುವ ವಿಶ್ವಾಸವಿದೆ. ಮುಂಬರುವ ಚುನಾವಣೆಯಲ್ಲಿ ವಿಜಯೇಂದ್ರ ಗೆಲುವು ಸಾಧಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಪ್ರವಾಸದ ಬಗ್ಗೆಯೂ ಸ್ಪಷ್ಟ ಮಾಹಿತಿ ನೀಡಿದ ಯಡಿಯೂರಪ್ಪ, ಇದರಲ್ಲಿ ಯೋಚನೆ ಮಾಡುವ ಪ್ರಶ್ನೆಯೇ ಇಲ್ಲ. ಆಗಸ್ಟ್ 21ರಿಂದ ರಾಜ್ಯ ಪ್ರವಾಸ ಆರಂಭವಾಗಲಿದೆ. ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ಒಟ್ಟಾರೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ರಾಜಾಹುಲಿ ಮುಂದಿನ ನಡೆಯೇನು? ಎಂಬ ಕುತೂಹಲಕ್ಕೆ ಕರಣವಾಗಿದೆ.
ಬಿ.ಎಸ್.ವೈ ರಾಜಕೀಯ ನಿವೃತ್ತಿ? ಏನಂದ್ರು ಬಿ.ವೈ.ವಿಜಯೇಂದ್ರ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button