ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಇಡಿ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಭ್ರಷ್ಟರ ವಿರುದ್ಧ ಸಮರ ಸಾರಿದ್ದು, ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಚಿವ ಪಾರ್ಥ ಚಟರ್ಜಿ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ನೇಮಕಾತಿ ಹಗರಣದಲ್ಲಿ ಭಾರಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ 26 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದ ಇಡಿ ಅಧಿಕಾರಿಗಳು ಇದೀಗ ಸಚಿವರನ್ನು ಬಂಧಿಸಿದ್ದಾರೆ.
ನಿನ್ನೆ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿ ವೇಳೆ ಮನೆಯಲ್ಲಿ ಬರೋಬ್ಬರಿ 20 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಹಣ, ಅಕ್ರಮ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದ ಅಧಿಕಾರಿಗಳು ಅರ್ಪಿತಾರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ದಾಳಿ ಬೆನ್ನಲ್ಲೇ ಇದೀಗ ಸಚಿವ ಪಾರ್ಥ ಚಟರ್ಜಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಕೆಲ ಹೊತ್ತಲೇ ನ್ಯಾಯಾಲಯದ ಮುದೆ ಹಾಜರುಪಡಿಸಲಿದ್ದಾರೆ.
ವಿದ್ಯಾರ್ಥಿನಿ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ