Latest

ಹೈಕಮಾಂಡ್ ನ್ನು ಇಕ್ಕಟ್ಟಿಗೆ ಸಿಲುಕಿಸಿದ್ರಾ ಮಾಜಿ ಸಿಎಂ ಯಡಿಯೂರಪ್ಪ? ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿನ್ನೆ ಶಿಕಾರಿಪುರದಿಂದ ಮಗ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಘೋಷಿಸುವ ಮೂಲಕ ರಾಜಕೀಯ ನಿವೃತ್ತಿ ಮಾತನಾಡಿದ್ದ ಬೆನ್ನಲ್ಲೇ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಸಚಿವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ದಾವಣಗೆರೆಯಿಂದ ವಾಪಸ್ ಆಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸಿಎಂ ಬೊಮ್ಮಾಯಿ ಹಾಗೂ ಸಚಿವ ಆರ್.ಅಶೋಕ್ ಕೆಲ ಕಾಲ ಚರ್ಚೆ ನಡೆಸಿದರು. ನಿನ್ನೆ ನೀಡಿದ್ದ ಹೇಳಿಕೆಯಿಂದ ಪಕ್ಷದ ಕಾರ್ಯಕರ್ತರಲ್ಲಿ, ನಾಯಕರಲ್ಲಿ ಹಾಗೂ ರಾಜ್ಯದ ಜನತೆಯಲ್ಲಿ ಉಂಟಾದ ಗೊಂದಲಗಳ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ನಾನೂ ಸೇರಿ ಕೆಲ ಸಚಿವರು ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತನಾಡಿದ್ದೇವೆ. ನಿನ್ನೆ ನಡೆದ ವಿಷಯವಿಷ್ಠೆ. ಬಿಎಸ್ ವೈ ಅವರು ಪ್ರತಿಬಾರಿ ಶಿಕಾರಿಪುರಕ್ಕೆ ಭೇಟಿಕೊಟ್ಟಾಗಲು ಜನ ನೀವೇ ಮುಂದುವರೆಯುವಂತೆ ಒತ್ತಾಯಿಸುತ್ತಿದ್ದರು. ನಿನ್ನೆ ಭೇಟಿ ನೀಡಿದಾಗಲೂ ಶಿಕಾರಿಪುರದ ಜನತೆ ನೀವೇ ಕ್ಷೇತ್ರದ ಶಾಸಕರಾಗಿ ಮುಂದುವರೆಯಬೇಕು ಎಂದು ಒತ್ತಾಯಿಸಿದ್ದಾರೆ. ಒತ್ತಡ ತಡೆಯಲಾಗದೇ ಈ ಬಾರಿ ನಾನು ಚುನಾವಣೆಯಲ್ಲಿ ನಿಲ್ಲಲ್ಲ. ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಸಲಹೆ ನೀಡಿದ್ದಾರೆ ಅಷ್ಟೇ ಕ್ಷೇತ್ರದ ಜನರ ಒತ್ತಾಸೆ ಮೇರೆಗೆ ಹಾಗೆ ಹೇಳಿದ್ದೇನೆ ಎಂದು ಅವರೇ ಸ್ಪಷ್ಟ ಪಡಿಸಿದ್ದಾರೆ ಎಂದು ತಿಳಿಸಿದರು.

ಸಲಹೆ ಮೂಲಕ ಹೈಕಮಾಂಡ್ ಹಾಗೂ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಮುಖ್ಯಮಂತ್ರಿ ಹುದ್ದೆ ತ್ಯಾಗ ಮಾಡಿದಾಗಲೇ ಯಾವುದೇ ಇಕ್ಕಟ್ಟಿಗೆ ಸಿಲುಕಿಸದೇ ಅತ್ಯಂತ ಸ್ಪಷ್ಟತೆ ಇಟ್ಟುಕೊಂಡು ನಿರ್ಧಾರ ಮಾಡಿದವರು, ಅಂತಹ ಹಿರಿಯರು ಈಗ ಇಕ್ಕಟ್ಟು ಸೃಷ್ಟಿಸುತ್ತಾರಾ? ಶಿಕಾರಿಪುರ ಮಹಾಜನತೆಯ ಒತ್ತಾಸೆಯ ಮೇರೆಗೆ ಸಲಹೆ ಕೊಟ್ಟಿದ್ದಾರೆ. ಯಾವ ಕ್ಷೇತ್ರದಿಂದ ಯಾರು ನಿಲ್ಲಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈಗ ಎದ್ದಿರುವಎಲ್ಲಾ ಗೊಂದಲಗಳಿಗೂ ತೆರೆ ಎಳೆಯಲಾಗುವುದು ಎಂದು ತಿಳಿಸಿದರು.

ನಿವೃತ್ತಿ ಬಗ್ಗೆ ಯಾವುದೇ ಯೋಚನೆಯಿಲ್ಲ, ನಾಳೆಯಿಂದಲೇ ಕಾರ್ಯಕ್ರಮ ಹಾಕಿದರೂ ಬರಲು ಸಿದ್ಧ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದಿದ್ದಾರೆ. ಯಡಿಯೂರಪ್ಪ ಎಂದರೆ ಒಂದು ಶಕ್ತಿ. 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅಂದು ಬಿಜೆಪಿಯ ಮುಂದಿನ ಕಾರ್ಯಕ್ರಮದ ರೂಪುರೇಷೆ ತಿಳಿಸಲಾಗುವುದು ಎಂದರು.

ಮುಖ್ಯಮಂತ್ರಿ ಯಾರು ಆಗಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತಿರ್ಮಾನ ಮಾಡುತ್ತದೆ – ಜಮೀರ್ ಖಾನ್

https://pragati.taskdun.com/latest/d-k-shivakumarrecationzameer-ahmed-khansiddaramaiah-cmstatment/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button