ಪ್ರಗತಿವಾಹಿನಿ ಸುದ್ದಿ; ಲಖನೌ: ಯುವಕನೊಬ್ಬ ನಾಲ್ಕು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಬಂದಾ ಗ್ರಾಮದಲ್ಲಿ ನಡೆದಿದೆ.
ನಾಲ್ಕು ವರ್ಷದ ಮಗುವಿನ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 22 ವರ್ಷದ ಆರೋಪಿಯನ್ನು ನರಾಯಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಫರೀದ್ ಎಂದು ಗುರುತಿಸಲಾಗಿದೆ. ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ಆಕೆಗೆ ಆಮಿಷವೊಡ್ಡಿ ಕರೆದೊಯ್ದ ಯುವಕ ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗು ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್ ಐ ಆರ್ ದಾಖಲಾಗಿದೆ.
https://pragati.taskdun.com/crime-news/14-years-girlraperepeatedly2-monthsgurugram/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ