Latest

ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ -ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಗೋಕಾಕ :

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ೩೪೦ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ದೊರಕಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಬಂದಿರುವುದಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ೫ ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಕಾರಣ ಎಂದು ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

  ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತ ಪ್ರಪಂಚದಲ್ಲಿಯೇ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಡೀ ಪ್ರಪಂಚವೇ ಭಾರತದತ್ತ ನೋಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಅಮೀತ ಶಾ ನೇತೃತ್ವದಲ್ಲಿ ಮುಂದಿನ ೧೦-೧೫ ವರ್ಷಗಳಲ್ಲಿ ಬಿಜೆಪಿ ಭಾರೀ ಬಹುಮತದಿಂದ ಅಧಿಕಾರ ನಡೆಸಲಿದೆ. ದೇಶದೆಲ್ಲೆಡೆ ನರೇಂದ್ರ ಮೋದಿ ಅವರ ಅಲೆ ಇರುವುದು ಈ ಚುನಾವಣೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಮೋದಿ ಅಲೆಯಿಂದಾಗಿಯೇ ವಿರೋಧ ಪಕ್ಷಗಳು ಧೂಳಿಪಟವಾಗಿವೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ೨೮ ಸ್ಥಾನಗಳ ಪೈಕಿ ೨೫ ಸ್ಥಾನಗಳಲ್ಲಿ ಅಭೂತಪೂರ್ವ ಜಯ ದಾಖಲಿಸಿರುವ ಬಿಜೆಪಿ ರಾಜ್ಯದಲ್ಲಿನ ಮೈತ್ರಿ ಸರ್ಕಾರದಲ್ಲಿನ ಒಡುಕು ಹಾಗೂ ಕೇಂದ್ರ ಸರ್ಕಾರದ ಸಾಧನೆಗಳು ಗೆಲುವಿಗೆ ಪೂರಕವಾಗಿವೆ.

ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಹೊಸ ಶಕೆ ಆರಂಭವಾಗಲಿದ್ದು, ಬಿಜೆಪಿಗೆ ವರದಾನವಾಗಿ ಪರಿಣಮಿಸಲಿದೆ. ಬದಲಾದ ರಾಜಕೀಯ ಸ್ಥಿತಿಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 

Home add -Advt

Related Articles

Back to top button