LatestUncategorized

*ಬಿಜೆಪಿಗೆ ರಾಜೀನಾಮೆ ನೀಡಿದ ಮಾಜಿ ಸಚಿವ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಪಕ್ಷದಲ್ಲಿ ಬಂಡಾಯ, ಅಸಮಾಧಾನ ಸ್ಫೋಟಗೊಂಡಿದ್ದು, ರಾಜೀನಾಮೆ ಪರ್ವ ಆರಂಭವಾಗಿದೆ. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವ ಮಾಲಕರೆಡ್ಡಿ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಎ.ಬಿ.ಮಾಲಕರೆಡ್ಡಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಝಿನಾಮೆ ನೀಡಿರುವ ಮಾಲಕ ರೆಡ್ಡಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

Home add -Advt

ಮಾಲಕರೆಡ್ಡಿ ಯಾದಗಿರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಮಾಜಿ ಪ್ರಧಾನಿ, ಜೆಡಿಎಸ್ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿಯಾದ ಮಾಲಕ ರೆಡ್ಡಿ ಅವರಿಂದ ಬಿಫಾರ್ಮ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

https://pragati.taskdun.com/d-k-shivakumarcm-postreaction/


Related Articles

Back to top button