Kannada NewsKarnataka NewsNationalPolitics
*ಸಂಸದರು, ಶಾಸಕರು ಸೇರಿದಂತೆ 13 ಜನರಿದ್ದ ಬೋಟ್ ಪಲ್ಟಿ*

ಪ್ರಗತಿವಾಹಿನಿ ಸುದ್ದಿ: ತೃಣಮೂಲ ಕಾಂಗ್ರೆಸ್ ಸಂಸದರು, ಶಾಸಕರು ಮತ್ತು ಉನ್ನತ ದರ್ಜೆಯ ಅಧಿಕಾರಿಗಳು ಸೇರಿದಂತೆ ಕನಿಷ್ಠ 13 ಜನರಿದ್ದ ಬೋಟ್ ಮಗುಚಿಬಿದ್ದಿರುವ ಘಟನೆ ಪಶ್ಚಿಮ ಬಂಗಾಲದ ಬಿರ್‌ಭೂಮ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುವ ವೇಳೆ ಅವಘಡ ಸಂಭವಿಸಿದೆ.
ಲಾಬ್‌ಪುರ್‌ನ ಟಿಎಂಸಿ ಶಾಸಕ ಅಭಿಜಿತ್ ಸಿಂಗ್, ಪಕ್ಷದ ಸಂಸದರಾದ ಅಸಿತ್ ಮಲ್ ಮತ್ತು ಶಮೀರುಲ್ ಇಸ್ಲಾಂ, ಬಿರ್‌ಭೂಮ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಧನ್ ರಾಯ್ ಮತ್ತು ಇತರ ಅಧಿಕಾರಿಗಳು ಬೋಟ್‌ನಲ್ಲಿ ಬೀರ್‌ಭಮ್‌ನ ಬಲರಾಮ್‌ಪುರ ಮತ್ತು ಲ್ಯಾಬ್‌ಪುರದ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಈ ವೇಳೆ ಯಾವುದೇ ಸುರಕ್ಷತಾ ಜಾಕೆಟ್ ಧರಿಸದ ತೃಣಮೂಲ ಸಂಸದರು ಮತ್ತು ಸ್ಥಳೀಯ ಅಧಿಕಾರಿಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಭಾರೀ ಮಳೆಯಿಂದ ಬಿರ್ಭುಮ್, ಬಂಕುರಾ, ಹೌರಾ, ಹೂಗ್ಲಿ, ಉತ್ತರ ಮತ್ತು ದಕ್ಷಿಣ 24 ಪರಗಣಗಳು, ಪುರ್ಬಾ ಮತ್ತು ಪಶ್ಚಿಮ ಮೇದಿನಿಪುರ್, ಪಶ್ಚಿಮ ಬರ್ಧಮಾನ್ ಜಿಲ್ಲೆಗಳು ಜಲಾವೃತವಾಗಿವೆ.
.




