Kannada NewsKarnataka NewsNationalPolitics

ನಕಲಿ ವೈದ್ಯರ ಹೆಡೆಮುರಿ ಕಟ್ಟಲು ಸರ್ಕಾರದ ದಿಟ್ಟ ಹೆಜ್ಜೆ

ಪ್ರಗತಿವಾಹಿನಿ ಸುದ್ದಿ: ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶಿಸಿದೆ.

ನಕಲಿ ವೈದ್ಯರ ಹೆಡೆಮುರಿ ಕಟ್ಟಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು, ಇತ್ತೀಚೆಗೆ ಎಲ್ಲಡೆ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಈ ಸಮಸ್ಯೆ ನೀಗಿಸಲು ಸರ್ಕಾರ ದಿಟ್ಟ ನಿರ್ಧಾರವೊಂದನ್ನು ಕೈಗೊಂಡಿದೆ. 

ಇಷ್ಟೇ ಅಲ್ಲದೆ, ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಆದೇಶಿಸಲಾಗಿದೆ.‌

ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದ್ದಾರೆ

Home add -Advt

ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button