LatestUncategorized

*ಗಡಿ ವಿವಾದ: ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ: ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಡಿಸೆಂಬರ್ 14 ಅಥವಾ 15 ರಂದು ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸೋಮವಾರದಂದು ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದೆ. ನಾನೂ ಕೂಡ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ. ಅವರು ಹೇಳಿ ಕಳಿಸಿದಾಗ ಬರಬೇಕಾಗುವುದು ಎಂದು ಹೇಳಿದ್ದಾರೆ. ಕರ್ನಾಟಕದ ವಿಚಾರ, ನಿಲುವು, ವಾಸ್ತವಾಂಶವನ್ನು ಈಗಾಗಲೇ ತಿಳಿಸಲಾಗಿದೆ. ಹಲವಾರು ವಿವರಗಳನ್ನು ಸಹ ನೀಡಲಾಗಿದೆ. ಭೇಟಿಯಾದ ಸಂದರ್ಭದಲ್ಲಿ ಕರ್ನಾಟಕದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗುವುದು ಎಂದರು.

Home add -Advt

ಸರ್ವ ಪಕ್ಷದ ಸಭೆ
ಸರ್ವ ಪಕ್ಷದ ಸಭೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಲಾಗಿದೆ. ಸಭೆ ನಿಗದಿಯಾದ ಕೂಡಲೇ ತಿಳಿಸಲಾಗುವುದು ಎಂದು ತಿಳಿಸಿದರು.

*Breaking News-* *ಗಡಿ ವಿವಾದ: ಕೊಲ್ಲಾಪುರದಲ್ಲಿ ಡಿ.23ರ ವರೆಗೆ ನಿಷೇಧಾಜ್ಞೆ ಜಾರಿ*

 

https://pragati.taskdun.com/karnataka-maharashtra-border-issuekollapura144-section/

Related Articles

Back to top button