Kannada NewsUncategorized

ಈಜಲು ಹೋದ ಬಾಲಕನ ತಲೆಗೆ ಕಲ್ಲು ಬಡಿದು ಸಾವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈಜಲು ಹೋದ ಬಾಲಕನೋರ್ವನ ತಲೆಗೆ ಕಲ್ಲು ಬಡಿದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.

ಬೆಳಗಾವಿ ತಾಲೂಕಿನ ಮಾಸ್ತಮರ್ಡಿ ಗ್ರಾಮದ ಬಾಲಕ ಕೃಷ್ಣ ಬಸವರಾಜ ಹಣಬರ (16) ಸಾವಿಗೀಡಾದ ಬಾಲಕ. ಈತ ಭಾನುವಾರ ಮಧ್ಯಾಹ್ನ ಸುಮಾರು 3:30 ಗಂಟೆಗೆ ಮರಕಟ್ಟಿ ಕ್ರಾಸ್ ಹತ್ತಿರ ಸಿದ್ದನಭಾವಿ ಕೊಳ್ಳದಲ್ಲಿ ಈಜಲು ಹೋಗಿದ್ದ. ನೀರಿನಲ್ಲಿ ತಲೆಗೆ ಕಲ್ಲು ಬಡಿದು ತೀವ್ರ ಗಾಯಗೊಂಡು ನೀರಿನಲ್ಲಿ ಮುಳುಗಿ ಬಾಲಕ ಸಾವಿಗೀಡಾಗಿದ್ದಾನೆ.

https://pragati.taskdun.com/heavy-rain-in-belgaum-wind-thunder/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button