Belagavi NewsBelgaum NewsKannada NewsKarnataka News

*ಸದ್ಯಕ್ಕೆ ಮಳೆಗೆ ಬ್ರೇಕ್: ತಾಪಮಾನದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು..?*

ಪ್ರಗತಿವಾಹಿನಿ ಸುದ್ದಿ : ಕಳೆದ ಕೆಲವು ದಿನಗಳಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದ ಧಾರಾಕಾರ ಮುಂಗಾರು ಮಳೆಯ ತೀವ್ರತೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಈ ಪ್ರಮುಖ ಭಾಗಗಳಲ್ಲಿ ವರುಣನ ಅಬ್ಬರ ಗಣನೀಯವಾಗಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿದಿದ್ದವು. ಆದರೆ ಪ್ರಸ್ತುತ ಹವಾಮಾನ ವೈಪರೀತ್ಯದ ಬದಲಾವಣೆಯಿಂದಾಗಿ ಮುಂದಿನ ಕೆಲವು ದಿನಗಳ ಕಾಲ ಕೇವಲ ಸಾಧಾರಣ ಮಳೆಯಷ್ಟೇ ನಿರೀಕ್ಷಿಸಲಾಗಿದೆ

Home add -Advt

ಮತ್ತೊಂದೆಡೆ, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ವಿಜಯಪುರ ಹಾಗೂ ಕಲ್ಬುರ್ಗಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಮಳೆಯ ಕೊರತೆ ಎದ್ದು ಕಾಣುತ್ತಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯಕ್ಕೆ ಮೋಡಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು ಬಲವಾದ ಮೇಲೆ ಗಾಳಿ ಬೀಸುವುದರಿಂದ ತಂಪು ವಾತಾವರಣ ಮುಂದುವರಿಯಲಿದೆ.

Related Articles

Back to top button