ಪ್ರಗತಿವಾಹಿನಿ ಸುದ್ದಿ: ಆಕಸ್ಮಿಕವಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಮಾಣಕಾಪುರ ಗ್ರಾಮದ ಬಳಿ ಇಂದು ನಡೆದಿದೆ.
ಬೆಳಗಾವಿಯಿಂದ ಮಹಾರಾಷ್ಟ್ರದ ಇಚಲಕರಂಜಿ ಪಟ್ಟಣಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಮಾನಾಕಾಪುರ ಗ್ರಾಮದ ಬಳಿ ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಇಡೀ ಕಾರು ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ