Belagavi NewsBelgaum NewsKarnataka News

*ಕರಾಳ ದಿನ ಆಚರಿಸಿದ ಎಂಇಎಸ್ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ಕರ್ನಾಟಕ ರಾಜ್ಯೋತ್ಸವದ ದಿನದಿಂದು ಕರಾಳ ದಿನ ಆಚರಿಸಿದ 40ಕ್ಕೂ ಹೆಚ್ಚು ಮಹಾರಾಷ್ಟ್ರ ಏಕೀಕರಣ ಸಮೀತಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.‌

ಕರ್ನಾಟಕ ರಾಜ್ಯೋತ್ಸವದಂದು ರಾಜ್ಯೋತ್ಸವಕ್ಕೆ ಪ್ರತಿಯಾಗಿ ಎಂಇಎಸ್ ನಡೆಸಿದ ಕರಾಳ ದಿನಾಚರಣೆ ಸಂಬಂಧ  40 ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮನವಿಗೆ ಸ್ಪಂದಿಸಿ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದರು.

ಮಾಜಿ ಶಾಸಕ ಮನೋಹರ ಕಿಣೇಕರ, ಮಾಜಿ ಮೇಯರ್ ಮಾಲೋಜಿ ಅಷ್ಟೇಕರ, ಪ್ರಕಾಶ ಮರಗಾಳೆ, ರಮಾಕಾಂತ ಕೊಂಡುಸ್ಕರ್, ರಂಜಿತ್ ಚವ್ಹಾಣ, ಅಮರ ಯಳೂರಕರ, ಗಜಾನನ ಪಾಟೀಲ, ನೇತಾಜಿ ಜಾಧವ, ಅಂಕುಶ ಕೇಸರಕರ, ವಿಕಾಸ ಕಲಘಟಗಿ, ಮದನ ಬಾಮನೆ, ಸಚಿನ ಕೇಳೇಕರ, ಪ್ರಶಾಂತ ಭಾಮನೆ, ಪ್ರಶಾಂತ್, ಕಿರಣ್ ಗಾವಡೆ, ಮಹಾದೇವ ಪಾಟೀಲ, ಶುಭಂ ಶೆಲ್ಕೆ, ರೇಣು ಕಿಲ್ಲೇಕರ್, ಸರಸ್ವತಿ ಪಾಟೀಲ, ಸರಿತಾ ಪಾಟೀಲ, ಕಿರಣ ಹುದ್ದಾರ್, ದತ್ತಾ ಉಘಾಡೆ, ಶ್ರೀಕಾಂತ ಕದಂ, ಚಂದ್ರಕಾಂತ ಕೊಂಡುಸ್ಕರ, ಸಂತೋಷ ಕೃಷ್ಣಾಚೆ, ಗುಂಡು ಕದಂ, ಸುನೀಲ ಬಾಳೇಕುಂದ್ರಿ, ಗಣೇಶ ದಡ್ಡಿಕರ,  ಸೇರಿದಂತೆ ಹಲವು ಎಂಇಎಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button