ಈ ವರ್ಷ ಪಠ್ಯಪುಸ್ತಕದಲ್ಲಿ ಬದಲಾವಣೆ? : ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷವಷ್ಟೇ ಶಾಲಾ ಪಠ್ಯಪುಸ್ತಕ ಪರಿಷ್ಕರಿಸಲಾಗಿತ್ತು. ಈ ವರ್ಷ ಯಾವುದೇ ಮುಖ್ಯ ಬದಲಾವಣೆಗಳನ್ನು ಮಾಡಲಾಗಿಲ್ಲ. ಕೆಲವು ಪದಗಳು ಹಾಗೂ ವಾಕ್ಯಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮೈಸೂರನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪರಿಷ್ಕೃತ ಪಠ್ಯಪುಸ್ತಕಗಳು ವೆಬ್‌ಸೈಟ್‌ನಲ್ಲಿ ಲಭ್ಯವಿದೆ. 95% ರಷ್ಟು ಪಠ್ಯಪುಸ್ತಕಗಳು ಈಗಾಗಲೇ ಶಾಲೆಗಳಿಗೆ ತಲುಪಿವೆ. ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಕೋವಿಡ್ ನಂತರ ಮಕ್ಕಳಿಗೆ ಸೈಕಲ್ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಸಂಪುಟದಲ್ಲಿ ಚರ್ಚಿಸಿ ವಿತರಿಸಲು ನಿರ್ಧರಿಸಲಾಗುತ್ತದೆ ಎಂದು ಹೇಳಿದರು.
ಶೂ ವಿತರಣೆಗೆ ಶಾಲಾಭಿವೃದ್ಧಿ ಸಮಿತಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಲಾಗುವುದು. ಬಿಬಿಎಂಪಿ ಶಾಲೆಗಳನ್ನು ಇಲಾಖೆ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕವಾಗಿದ್ದು, ಈ ಬಗ್ಗೆ ಜೂನ್ 4 ರ ನಂತರ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ