Kannada NewsKarnataka News
*ಒಂದೇ ಕುಣಿಕೆಯಲ್ಲಿ ನೇಣುಬಿಗಿದುಕೊಂಡು ದಂಪತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಒಂದೇ ಕುಣಿಕೆಯಲ್ಲಿ ನೇಣುಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೋಲಾರ ತಾಲೂಕಿನ ಮಂಜಲಿ ಗ್ರಾಮದ ಬಳಿ ನಡೆದಿದೆ. ಮಾಲಾಶ್ರೀ (35), ಲಕ್ಷ್ಮಣ್ (38) ಆತ್ಮಹತ್ಯೆಗೆ ಶರಣಾದವರು.
ಲಕ್ಷ್ಮಣ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಹಾಗೂ ಪತ್ನಿ ಮಾಲಾಶ್ರೀ ಅಕ್ಷರ ದಾಸೋಹ ಕಾರ್ಯಕ್ರಮದಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ದಂಪತಿಯ ಸಾವಿಗೆ ಯಾವುದೇ ಕಾರಣ ತಿಳಿದು ಬಂದಿಲ್ಲ ಹಾಗೂ ಮೃತರ ಬಳಿ ಯಾವುದೇ ಡೆತ್ ನೋಟ್ ಕೂಡ ಪತ್ತೆಯಾಗಿಲ್ಲ
ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




