CrimeKannada NewsKarnataka News

*ದೀಪಾವಳಿ ಹಬ್ಬದಂದೇ ದುರಂತ ಅಂತ್ಯ ಕಂಡ ದಂಪತಿ*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದಂಪತಿ ಸ್ವಿಫ್ಟ್ ಡಿಸೈ‌ರ್ ಕಾರಿನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಅಪರಿಚಿತ ವಾಹನವೊಂದು ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಡಿಕ್ಕಿಯ ಭೀಕರತೆಗೆ ಕಾರು ಪಲ್ಟಿಯಾಗಿದೆ. ದಂಪತಿ ಸ್ಥಳದಲ್ಲೇ ಸಾವಿಗೀಡಾದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹೊಸಳ್ಳಿ ಕ್ಯಾಂಪ್ ಬಳಿ ಸಂಭವಿಸಿದೆ. ಬಳ್ಳಾರಿಯ ಇಂದಿರಾನಗರದ ನಿವಾಸಿಗಳಾದ ರಾಘವೇಂದ್ರ (27) ಮತ್ತು ಹೇಮಲತಾ (26) ಮೃತಪಟ್ಟ ದುರ್ದೈವಿಗಳು. ಇವರು ಸಿಂಧನೂರಿನಿಂದ ಬಳ್ಳಾರಿಗೆ ಸ್ವಿಫ್ಟ್ ಡಿಸೈ‌ರ್ ಕಾರಿನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಅಪರಿಚಿತ ವಾಹನವೊಂದು ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಡಿಕ್ಕಿಯ ಭೀಕರತೆಗೆ ಕಾರು ಪಲ್ಟಿಯಾಗಿದೆ.

ಈ ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿ ಪ್ರಾಣ ಕಳೆದುಕೊಂಡಿದ್ದು ಹಿಂಬದಿ ಸೀಟಿನಲ್ಲಿ ಕುಳಿತಿದ್ದ ರವಿಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸಿಂಧನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Related Articles

Back to top button