
ಪ್ರಗತಿವಾಹಿನಿ ಸುದ್ದಿ: ತಮ್ಮದೇ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ದಂಪತಿ ಭಾನುವಾರ ಕೇರಳದ ಪರಸ್ಪಾಲ ಪಟ್ಟಣದಲ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಪ್ರಾಥಮಿಕವಾಗಿ ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ.
ಈ ದಂಪತಿ ಸೆಲ್ಲು ಫ್ಯಾಮಿಲಿ ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಈ ಚಾನಲ್ ಸುಮಾರು 18,000 ಚಂದಾದಾರರನ್ನು ಹೊಂದಿದೆ ಹಾಗೂ ಇದರಲ್ಲಿ 1,400 ಕ್ಕೂ ಹೆಚ್ಚು ವೀಡಿಯೊಗಳನ್ನು ಇಲ್ಲಿವರೆಗೆ ಪೋಸ್ಟ್ ಮಾಡಲಾಗಿದೆ. ಈ ದಂಪತಿ ಕೊನೆಯ ವೀಡಿಯೊ ಶುಕ್ರವಾರ ರಾತ್ರಿ ಪೋಸ್ಟ್ ಮಾಡಲಾಗಿದ್ದು, ಅವರ ಎಲ್ಲಾ ಫೋಟೋಗಳ 55 ಸೆಕೆಂಡುಗಳ ಕೊಲೆಜ್ ಮಾಡಿ ಪೋಸ್ಟ್ ಮಾಡಲಾಗಿದೆ.
ಶುಕ್ರವಾರದ ಬಳಿಕ ಈ ದಂಪತಿ ಮನೆಯಿಂದ ಹೊರಗೆ ಬಾರದ್ದನ್ನು ಗಮಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಸೆಲ್ವರಾಜ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಪತ್ನಿ 40 ವರ್ಷದ ಪ್ರಿಯಾ ಅವರ ಮೃತದೇಹ ಹಾಸಿಗೆಯ ಮೇಲೆ ಪತ್ತೆಯಾಗಿದೆ ಎಂದು ಪರಸ್ಸಾಲ ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ತಿಳಿದುಬಂದ ಮಾಹಿತಿಯ ಪ್ರಕಾರ ಎರಡು ದಿನಗಳ ಹಿಂದೆ ಸಾವು ಸಂಭವಿಸಿರಬಹುದು ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ