Karnataka News

*ಮೂವರು ಮಕ್ಕಳನ್ನು ನದಿಗೆ ಎಸೆದು ತಾನು ಆತ್ಮಹತ್ಯೆ ಮಾಡಿಕೊಂಡ ತಂದೆ*

ಪ್ರಗತಿವಾಹಿನಿ ಸುದ್ದಿ: ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಗದಗದಲ್ಲಿ ನಡೆದಿದೆ.

ಮೃತರು ವೇದಾಂತ್ (3), ಪವನ್ (4), ಧನ್ಯಾ (6) ಹಾಗೂ ತಂದೆ ಮಂಜುನಾಥ್ ಎಂಬುದಾಗಿ ತಿಳಿದು ಬಂದಿದೆ. ಮಂಜುನಾಥ್ ಮೊದಲು ತನ್ನ ಮೂವರು ಮಕ್ಕಳನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿಯಲ್ಲಿರುವ ತುಂಗಭದ್ರಾ ನದಿಗೆ ಎಸೆದಿದ್ದಾನೆ. ನಂತರ ತಾನೂ ಸಾವಿಗೆ ಶರಣಾಗಿದ್ದಾನೆ.

ಇತ್ತ ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಮೃತರ ಶವಗಳನ್ನು ತುಂಗಭದ್ರಾ ನದಿಯಿಂದ ಹೊರ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button