Latest

ಸುಮಲತಾ ನಾಮಪತ್ರ ಸಲ್ಲಿಕೆ: ಮಂಡ್ಯದತ್ತ ಎಲ್ಲರ ಚಿತ್ತ

ಪ್ರಗತಿವಾಹಿನಿ ಸುದ್ದಿ, ಮಂಡ್ಯ

ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ್ದು, ಅಭಿಮಾನಗಳೊಂದಿಗೆ ರ್ಯಾಲಿ ಆರಂಭಿಸಿದ್ದಾರೆ. 

ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸುಮಲತಾ ನಂತರ ಮಂಡ್ಯಕ್ಕೆ ತೆರಳಿ ತಮ್ಮ ನಾಮಪಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಗಳು ಸೇರಿದ್ದು, ಎಲ್ಲಿ ನೋಡಿದರೂ ಸುಮಲತಾ ಪರ ಘೋಷಣೆಗಳು ಮೊಳಗುತ್ತಿವೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಇದೇ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವುದರಿಂದ ಈ ಕ್ಷೇತ್ರ ಈಗ ಎಲ್ಲರ ಗಮನ ಸೆಳೆದಿದೆ. 

ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡುವುದೋ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದೋ ಎನ್ನುವುದು ಇನ್ನೂ ಖಚಿತವಾಗಿಲ್ಲ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button