Kannada NewsKarnataka NewsLatest

*ಟ್ರೆಕ್ಕಿಂಗ್‌ಗೆ ತೆರಳಿದ್ದ ಮತ್ತೋರ್ವ ಯುವತಿ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಸಾದ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. 

ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀ ನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ.

Home add -Advt

ಚಾರಣಕ್ಕೆ ಹೋಗಿದ್ದ ಯುವತಿ ನಂದಾ ನಾಪತ್ತೆಯಾಗಿದ್ದು ಕೇರಳದ ಪಾಲಕ್ಕಾಡ್ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಕೇರಳದಿಂದ ಬಂದಿದ್ದ 40 ಜನರ ಪ್ರವಾಸಿಗರ ತಂಡ ಹಾಗೂ ಕುಟುಂಬದೊಂದಿಗೆ ನಂದನ ಬಂದಿದ್ದರು.

ಪರ್ವತದ ಸುಂದರ ತಾಣಗಳನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ನಂದನ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಸದ್ಯ ಘಟನೆಯಿಂದ ಕುಟುಂಬ ಸದಸ್ಯರು ಕಂಗಾಲಾಗಿದ್ದಾರೆ.

ಯುವತಿಯ ನಾಪತ್ತೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾ‌ರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button