
ಪ್ರಗತಿವಾಹಿನಿ ಸುದ್ದಿ: ಖುಷಿ ಖುಷಿಯಿಂದ ಬ್ಯಾಗ್ ಏರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ ಬಾಲಕಿ ಉಸಿರು ಚೆಲ್ಲಿದ್ದಾಳೆ. ಮುಂಜಾನೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ. ವಿದ್ಯುತ್ ಸ್ಪರ್ಶಿಸಿ ಬಾಲಕಿ ದಾರುಣ ಅಂತ್ಯ ಕಂಡಿದ್ದಾಳೆ.
ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ತುಳಸಿ ಎಂಬಾಕೆ ಕರೆಂಟ್ ಶಾಕ್‌ನಿಂದ ಮೃತಪಟ್ಟವಳು. ತುಳಸಿ ಅದೇ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.
ಬಾಲಕಿ ತುಳಸಿ ಕರೆಂಟ್ ಶಾಕ್‌ನಿಂದ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಮಡುಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೂಡ್ಲಿಗಿ ಪಿಎಸ್‌ಐ ಎರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ