Kannada NewsLatestNational

ತಿರುಪತಿ ಬೆಟ್ಟ ಏರುತ್ತಿದ್ದ ಬಾಲಕಿ ಚಿರತೆ ದಾಳಿಗೆ ಬಲಿ

ಪ್ರಗತಿವಾಹಿನಿ ಸುದ್ದಿ, ತಿರುಮಲ: ತಿರುಪತಿ ವೆಂಕಟೇಶನ ದರ್ಶನಕ್ಕೆಂದು ಕಾಲ್ನಡಿಗೆಯಲ್ಲಿ ತಿರುಮಲ ಬೆಟ್ಟ ಏರುತ್ತಿದ್ದ 6 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದಾಳೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೊವ್ವೂರು ಮಂಡಲದ ಪೋತಿರೆಡ್ಡಿಪಾಲೆಂ ಗ್ರಾಮದ ದಿನೇಶ ಕುಮಾರ್‌ ಮತ್ತು ಶಶಿಕಲಾ ದಂಪತಿ ಪುತ್ರಿ ಲಕ್ಷಿತಾ (6) ಮೃತಪಟ್ಟವಳು. ಇವರೆಲ್ಲ ತಿರುಮಲ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಸಾಗುತ್ತಿದ್ದರು. ಶುಕ್ರವಾರ ರಾತ್ರಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ತಲುಪಿದಾಗ ಹಠಾತ್ತಾಗಿ ಎರಗಿದ ಚಿರತೆ ಬಾಲಕಿಯನ್ನು ಸಮೀಪದ ಅರಣ್ಯಕ್ಕೆ ಎಳೆದೊಯ್ದಿದೆ. ಪಾಲಕರು ಮತ್ತು ಸಹ ಪಾದಚಾರಿಗಳು ರಕ್ಷಣೆಗೆ ಯತ್ನಿಸಿದರೂ ಕತ್ತಲಾಗಿದ್ದರಿಂದ ಸಾಧ್ಯವಾಗಲಿಲ್ಲ.

ಟಿಟಿಡಿ ಭದ್ರತಾಧಿಕಾರಿಗಳು, ಸ್ಥಳೀಯ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ, ಬೆಳಗಿನಜಾವ ಅರಣ್ಯ ಪ್ರದೇಶದಲ್ಲಿ ಬಾಲಕಿಗಾಗಿ ಹುಡುಕಾಟ ನಡೆಸಿದಾಗ, ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಶವ ಪತ್ತೆಯಾಗಿದೆ.

ಇಂಥ ಘಟನೆಯೊಂದು ಈ ಮಾರ್ಗದಲ್ಲಿ ಇದೇ ಮೊದಲ ಬಾರಿಗೆ ಸಂಭವಿಸಿದೆ ಎನ್ನಲಾಗಿದ್ದು, ಟಿಟಿಡಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ.

Home add -Advt

Related Articles

Back to top button