

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಚಿವ ಸಂಪುಟದ ಸಹೋದ್ಯೋಗಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಪುತ್ರ ಕರಣ್ ಲಾಡ್ ಬರೆದಿರುವ ‘A Glitch in the Simulation’ ಪುಸ್ತಕ ಬಿಡುಗಡೆ ಮಾಡಲಾಯಿತು.
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕರ್, ಬೋಸರಾಜು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸದಸ್ಯ ಚೆನ್ನರಾಜ ಹಟ್ಟಿಹೊಳಿ ಸೇರಿದಂತೆ ಸಚಿವ ಸಂತೋಷ್ ಲಾಡ್ ಕುಟುಂಬ ಸದಸ್ಯರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ