Belagavi NewsBelgaum NewsKannada NewsKarnataka News

*ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಸುವರ್ಣಸೌಧದಲ್ಲಿ ನಡೆಯಲಿದೆ ನೇರ ಸಂದರ್ಶನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದ್ದು, ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 31ರಂದು ಶನಿವಾರ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಐಟಿಐ, ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಬೆಳಗಾವಿಯ ಸುವರ್ಣ ವಿಧಾನಸೌಧದ ತಳಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೊಠಡಿ ಸಂಖ್ಯೆ ಟಿಪಿ2 ಮತ್ತು ಟಿಪಿ3ರಲ್ಲಿ ಸಂದರ್ಶನ ನಡೆಯಲಿದೆ.

ಉದ್ಯೋಗಾವಕಾಶ ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ಇತರೆ ಯಾವುದೇ ಸೌಲಭ್ಯಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ 7899683036 ಅಥವಾ 7975856566 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button