Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಗಣೇಶ ಉತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂದು 11 ನೇ ದಿನದ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. 

ಇಂದು ಬೆಳಗಾವಿ ನಗರದ ರಾಮದೇವ ಗಲ್ಲಿಯ ಹುತಾತ್ಮ ಚೌಕ್ ನಲ್ಲಿ ಲೋಕಮಾನ್ಯ ತಿಲಕ್ ಗಣೇಶ ಮಹಾ ಮಂಡಲದವರ ಗಣೇಶನಿಗೆ ಪೂಜೆ ನಡೆಸಲಾಯಿತು. ಈ ಪೂಜೆ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ವತಿಯಿಂದ ಆರತಿ ಮಾಡುವ ಮೂಲಕ ವಿಸರ್ಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಶಾಸಕ ಅಭಯ ಸ್ವತಃ ಟ್ರ್ಯಾಕ್ಟರ್ ಚಲಾಯಿಸಿ ಎಲ್ಲರ ಗಮನ ಸೆಳೆದರು. 

ಬಳಿಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಢೋಲ್ ತಾಶ್ ಬಾರಿಸಿದರು. ಈ ವೇಳೆ, ಮಹಾಪೌರರಾದ ಸವಿತಾ ಕಾಂಬಳೆ, ಶಾಸಕರಾದ ಅಭಯ ಪಾಟೀಲ್, ಆಸೀಫ್ ಸೇಠ್, ಮಾಜಿ ಶಾಸಕರಾದ ಅನಿಲ ಬೆನಕೆ, ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾಪಂಚಾಯತ ಸಿಇಒ ರಾಹುಲ್ ಶಿಂಧೆ, ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ತರಬೇತಿ ನೀರತ ಐಎಎಸ್ ಅಧಿಕಾರಿ ದಿನೇಶ್ ಮೀನಾ ಸೇರಿದಂತೆ ಅನೇಕರು ಇದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button