ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಿ ಬೆಳಗಾವಿ ನಗರಕ್ಕೆ ಬುಧವಾರ ಸಂಜೆ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸ್ವಾಗತಿಸಲಾಯಿತು.
ಉಪ ಮಹಾಪೌರರಾದ ಆನಂದ ಚವಾಣ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ್ ದುಡಗುಂಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಉಪ ವಿಭಾಗಾಧಿಕಾರಿ ಶ್ರವಣ್ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ