
ಪ್ರಗತಿವಾಹಿನಿ ಸದ್ದಿ, ಬೆಳಗಾವಿ: ಕಿತ್ತೂರಿನ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಮತ್ತು ಪೊಲೀಸರು ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ.
4.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕಾರು ಸಮೇತ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಆಭರಣಗಳಿಗೆ ಯಾವುದೇ ದಾಖಲೆಗಳಿಲ್ಲದ್ದರಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ.