*ಡಿ.22 ರಿಂದ 30 ರವರೆಗೆ ಬೆಳಗಾವಿಯಲ್ಲಿ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ‘ಅಸ್ಮಿತೆ’ ವ್ಯಾಪಾರ ಜಾತ್ರೆ- 2022
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಬೆಳಗಾವಿಯಲ್ಲಿ ಅಧಿವೇಶನದ ನಿಮಿತ್ತ 22 ರಿಂದ 30 ರವರೆಗೆ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಮೇಳ ಉದ್ಘಾಟಿಸಲಿದ್ದಾರೆ. ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಉಪಸ್ಥಿತರಿರುವರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಅತ್ಯಂತ ಪ್ರಮುಖ ಮತ್ತು ಅತ್ಯುತ್ತಮ ಗುಣಮಟ್ಟದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಈ ಮೇಳದಲ್ಲಿ ನಡೆಯಲಿದೆ. ಗ್ರಾಮೀಣ ಉದ್ಯಮ ಯೋಜನೆಯಡಿ ಕೊಪ್ಪಳ ಹಾಗೂ ಟಿ.ನರಸೀಪುರ ತಾಲೂಕುಗಳ ಸ್ವ-ಸಹಾಯ ಗುಂಪುಗಳಿಗೆ ಸಮುದಾಯ ಉದ್ಯಮ ನಿಧಿ ವಿತರಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಜಲ ಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಭಾಗವಹಿಸಲಿದ್ದಾರೆ. ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸುವರು ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ. ರಾಗಪಿಯಾ ಆರ್. ತಿಳಿಸಿದ್ದಾರೆ.
150 ಮಳಿಗೆ ಸ್ಥಾಪನೆ; ಪ್ರವೇಶ ಉಚಿತ:
ಈ ಮೇಳದಲ್ಲಿ 150 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಬೆಳಗ್ಗೆ 10.30 ರಿಂದ ರಾತ್ರಿ 9.30ರವರೆಗೆ ಪ್ರದರ್ಶನದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ
ಈ ಮಳಿಗೆಯಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳಾದ ಈ ಮೇಳದಲ್ಲಿ ಕರಕುಶಲ ವಸ್ತುಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಉಪ್ಪಿನಕಾಯಿ, ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಉತ್ಪನ್ನಗಳು ಮುಂತಾದವುಗಳು ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ.
ಈ ಮೇಳದ ಮೈದಾನದಲ್ಲಿ ಮಕ್ಕಳಿಗೆ ಆಟಿಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಉತ್ತರ ಕರ್ನಾಟಕ ಸೇರಿದಂತೆ ಹೆಸರುವಾಸಿ ಆಹಾರಗಳ 10 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಪ್ರಮುಖವಾಗಿ, ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದ ಚುರುಮರಿ ಮಂಡಕ್ಕಿ, ಜೋಳದ ಖಡಕ್ ರೊಟ್ಟಿ ಸೇರಿದಂತೆ ಹೋಳಿಗೆ, ನೀರ್‍ದೋಸೆ ಮುಂತಾದ ಖಾದ್ಯಗಳು ದೊರೆಯಲಿವೆ.
25 ರಂದು ಅರ್ಜುನ ಜನ್ಯ-ಶಮಿತಾ ಮಲ್ನಾಡ ಸಂಗೀತ ಸಂಜೆ:
ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕಿ ಡಾ.ಶಮಿತಾ ಮಲ್ನಾಡ್ ಹಾಗೂ ತಂಡದವರಿಂದ 25 ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿರುತ್ತದೆ ಹಾಗೂ ಪ್ರತೀ ದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುತ್ತಿರುವುದರಿಂದ ಹೆಚ್ಚು ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗ ಪಡೆದು ಸ್ವ-ಸಹಾಯ ಗುಂಪಿನ ಮಹಿಳೆಯರ ಆರ್ಥಿಕ ಸಬಲತೆಗೆ ಬೆಂಬಲಿಸಲು ಕೈಜೋಡಿಸಬೇಕೆಂದು ಡಾ. ರಾಗಪ್ರಯಾ ಕೋರಿದ್ದಾರೆ.
ಮೊದಲ ವರ್ಷದಲ್ಲಿ, 278 ವ್ಯವಹಾರ ಯೋಜನೆಯನ್ನು ಸಿದ್ದಪಡಿಸಲಾಗಿದೆ ಮತ್ತು ಹಣವನ್ನು ಬಿಡುಗಡೆ ಮಾಡಲಾಗುವುದು. ಫಲಾನುಭವಿಗಳಿಗೆ ಒಟ್ಟು 1.00 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಮತ್ತು ರಾಮನಗರ ತಾಲೂಕುಗಳಲ್ಲಿ ಕ್ರಮವಾಗಿ ಕಾರ್ಯಕ್ರಮದ ಅನುಷ್ಠಾನವನ್ನು ಪ್ರಾರಂಭಿಸಲು ಪ್ರಾಜೆಕ್ಟ್ ಇಂಪ್ಲಿಮೆಂಟಿಂಗ್ ಏಜೆನ್ಸಿಗೆ 50ರೂ.ಲಕ್ಷ ಬಿಡುಗಡೆ ಮಾಡಲಾಗುತ್ತಿದೆ.
ಸಂಜೀವಿನಿ-ಕೆಎಸ್‍ಆರ್‍ಎಲ್‍ಪಿಎಸ್ ಸಂಸ್ಥೆಯು ಈ ಕಾರ್ಯಕ್ರಮದಲ್ಲಿ ಹೊಸ ತಾಲ್ಲೂಕುಗಳಿಗೆ NIMSMSE ಹೈದರಾಬಾದ್ ಮತ್ತು SVSSS ಬೆಳಗಾವಿಯೊಂದಿಗೆ ತಾಂತ್ರಿಕ ಬೆಂಬಲದ ಒಡಂಬಡಿಕೆಗೆ ಈ ಸಹಿ ಮಾಡಲಾಗುವುದು ಎಂದು ಡಾ. ರಾಗಪಿಯಾ.ಆರ್ ತಿಳಿಸಿದ್ದಾರೆ.
*ಶಿಕ್ಷಣ ಕ್ಷೇತ್ರದ ಅಪಾರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಹೊರಟ್ಟಿಯವರು; ಸಿಎಂ ಬೊಮ್ಮಾಯಿ ಶ್ಲಾಘನೆ*
https://pragati.taskdun.com/basavaraj-horattividhana-parishath-speakercm-basavaraj-bommai/
ಸುಮಾ ಕಾಟ್ಕರ್ ಅನುವಾದಿತ ಕವನ ಸಂಕಲನ ಬಿಡುಗಡೆ
https://pragati.taskdun.com/release-of-poetry-collection-translated-by-suma-katkar/
*ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ*
https://pragati.taskdun.com/karnatakacovid-alertdr-sudhakarbbmpmask/
*ನೀರು ಬಂದ್ ಮಾಡಲು, ಡ್ಯಾಂ ಎತ್ತರಿಸಲು ಅವರ ತಾತನ ಮನೆಯದ್ದಲ್ಲ; ಸಚಿವ ಕಾರಜೋಳ ಆಕ್ರೋಶ*
https://pragati.taskdun.com/govinda-karajolavidhanasabhewater-issuencp-jayanth-patil/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ