ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)ಯು ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್(NCS), ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಗೆ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರಿನ ರಾಜಾಜಿನಗರದ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಭಾಗವಹಿಸಲು ವೆಬ್‌ಸೈಟ್ https://jobfair.calicut.nielit.in ಮೂಲಕ ಉದ್ಯೋಗ ಮೇಳಕ್ಕೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿರುತ್ತದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ