
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎರಡು ದಿನದಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹತ್ತಾರು ಅವಾಂತರಗಳು ಸೃಷ್ಠಿಯಾಗಿವೆ. ಜೋರಾದ ಗಾಳಿ, ಮಳೆಗೆ ಬೃಹತ್ ಗಾತ್ರದ ಮರ ಬಿದ್ದು, ಕಾರು ಬೈಕ್ ಗಳು ಜಖಂ ಆಗಿದೆ.
ಬೆಳಗಾವಿ ತಾಲೂಕಿನ ಮಜಗಾವಿಯಲ್ಲಿ ಸಂಜೆ ಘಟನೆ ನಡೆದಿದೆ. ಈ ಘಟನೆಯಲ್ಲಿ ಎರಡು ಬೈಕ್ ಹಾಗೂ ಒಂದು ಕಾರು ಜಖಂ ಆಗಿದೆ. ವಿದ್ಯುತ್ ಕಂಬದ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ, ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿದ್ದಾರೆ. ಉದ್ಯಮಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ