Belagavi NewsBelgaum NewsKannada NewsKarnataka News

*ಬೈಕ್ ಹಾಗೂ ಕಾರ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎರಡು ದಿನದಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹತ್ತಾರು ಅವಾಂತರಗಳು ಸೃಷ್ಠಿಯಾಗಿವೆ. ಜೋರಾದ ಗಾಳಿ, ಮಳೆಗೆ ಬೃಹತ್ ಗಾತ್ರದ ಮರ ಬಿದ್ದು, ಕಾರು ಬೈಕ್ ಗಳು ಜಖಂ ಆಗಿದೆ.‌

ಬೆಳಗಾವಿ ತಾಲೂಕಿನ ಮಜಗಾವಿಯಲ್ಲಿ ಸಂಜೆ ಘಟನೆ ನಡೆದಿದೆ. ಈ ಘಟನೆಯಲ್ಲಿ ಎರಡು ಬೈಕ್ ಹಾಗೂ ಒಂದು ಕಾರು ಜಖಂ ಆಗಿದೆ.‌ ವಿದ್ಯುತ್ ಕಂಬದ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.‌

Home add -Advt

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ, ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿದ್ದಾರೆ.‌ ಉದ್ಯಮಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button