Kannada NewsKarnataka NewsLatest

ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಪ್ರಗತಿವಾಹಿನಿ ಸುದ್ದಿ, ಹಾಸನ: ಕುಟುಂಬ ಕಲಹದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ನಡೆದಿದೆ.

ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್ ಹಲ್ಲೆ ನಡೆಸಿದ ಆರೋಪಿ. ಈತನ ಪತ್ನಿ ಸವಿತಾ ಗಾಯಗೊಂಡವರು.

Home add -Advt

ಎರಡು ವರ್ಷಗಳಿಂದ ದಂಪತಿ ಮಧ್ಯೆ ವಿರಸ ಉಂಟಾಗಿ ಪದೇಪದೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ವಿಚಾರದಲ್ಲಿ ಸವಿತಾ ಅವರು ಶ್ರೀನಿವಾಸ್ ವಿರುದ್ಧ ಕೇಸು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಜಗಳ ಆರಂಭಿಸಿದ ಶ್ರೀನಿವಾಸ ಸವಿತಾ ಅವರನ್ನು ಮನೆಯೆದುರು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಇಷ್ಟಕ್ಕೇ ಬಿಡದ ಶ್ರೀನಿವಾಸ ಸವಿತಾ ಅವರ ಸಹೋದರಿ ಅನಿತಾ ಅವರ ಕಾರನ್ನೂ ಜಖಂಗೊಳಿಸಿದ್ದಾಗಿ ಆರೋಪಿಸಲಾಗಿದೆ.

ಸವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button