Kannada NewsKarnataka NewsNational

*ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ಬಳಿಕ ಪತಿ ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೆಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

Home add -Advt

ದೊಡ್ಡಸಾಲಾವರ ಗ್ರಾಮದ ಹರೀಶ್ (50) ತನ್ನ ಹೆಂಡತಿ ಜಾಜಿ (45)ಗೆ ಗುಂಡಿಕ್ಕಿ ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ಪ್ರತಿದಿನ ಒಂದಲ್ಲ ಒಂದು ಕಾರಣಕ್ಕೆ ಜಗಳವಾಡುತ್ತಿದ್ದರು. ನಿನ್ನೆ ರಾತ್ರಿಯೂ ಮನೆಯಲ್ಲಿ ದಂಪತಿ ನಡುವೆ ಗಲಾಟೆಯಾಗಿದೆ. ಕಲಹ ವಿಕೋಪಕ್ಕೆ ತಿರುಗಿದೆ, ಬಳಿಕ ಹರೀಶ್ ಪತ್ನಿ ಜಾಜಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ.

ನಂತರ ಹರೀಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆಕೈಗೊಂಡಿದ್ದಾರೆ.

Related Articles

Back to top button