Latest

ಬಸವಕಲ್ಯಾಣದಲ್ಲಿ ಬಿಜೆಪಿ ಭರ್ಜರಿ ಗೆಲುವು

ಪ್ರಗತಿವಾಹಿನಿ ಸುದ್ದಿ; ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಕಾಂಗ್ರೆಸ್ ವಿರುದ್ಧ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶರಣು ಸಲಗರ 20,904 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಶರಣು ಸಲಗರ 70,556 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಮಾಲಾ 50,108 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸೈಯದ್ ಅಲಿ 11,390 ಮತಗಳನ್ನು ಪಡೆದುಕೊಂಡಿದ್ದಾರೆ.

ಬಸವಕಲ್ಯಾಣದಲ್ಲಿ ಗೆಲುವು ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ಅಭ್ಯರ್ಥಿ ಶರಣು ಸಲಗರ, ಬಿಜೆಪಿಯ ಓರ್ವ ಸಾಮಾನ್ಯ ಕಾರ್ಯಕರ್ತ ಇಂದು ಶಾಸಕನಾದ ದಿನ. ಇದು ಕೇವಲ ನನ್ನ ಗೆಲುವಲ್ಲ ಕ್ಷೇತ್ರದ ಮತದಾರರ ಗೆಲುವು. ಈ ಗೆಲುವನ್ನು ಪಕ್ಷದ ನಾಯಕರಿಗೆ ಸಮರ್ಪಿಸುವುದಾಗಿ ಹೇಳಿದ್ದಾರೆ.
ನನಗೆ ವಿಶ್ವಾಸ ದ್ರೋಹವಾಗಿದೆ ಎಂದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್

Home add -Advt

Related Articles

Back to top button