ಪ್ರಗತಿವಾಹಿನಿ ಸುದ್ದಿ, ಭೋಪಾಲ್: ವಧುವಿನ ಕುಟುಂಬದವರನ್ನು ಸಾಗಿಸುತ್ತಿದ್ದ ಲಾರಿಯೊಂದು ನದಿ ದಡದಲ್ಲಿ ಉರುಳಿ ಬಿದ್ದು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ.
ಈ ದುರ್ಘಟನೆ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ಬುಹಾರಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ದುರ್ಘಟನೆಯಲ್ಲಿ 65 ವರ್ಷದ ಮಹಿಳೆ, 18 ವರ್ಷದ ವ್ಯಕ್ತಿ ಹಾಗೂ 2-3 ವರ್ಷದೊಳಗಿನ ಮೂವರು ಮಕ್ಕಳು ಮೃತಪಟ್ಟಿರುವುದನ್ನು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ದೃಢಪಡಿಸಿದ್ದಾರೆ. ಇತರ 24 ಜನರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಲಾರಿಯಲ್ಲಿ ಪ್ರಯಾಣಿಸುತ್ತಿದ್ದವರು ಗ್ವಾಲಿಯರ್‌ನ ಬಿಲ್ಹೇಟಿ ಗ್ರಾಮದ ನಿವಾಸಿಗಳಾಗಿದ್ದು, ಮದುವೆ ಸಮಾರಂಭಕ್ಕೆ ಟಿಕಮ್‌ಗಡಕ್ಕೆ ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು. ಲಾರಿ ರಸ್ತೆಯಿಂದ ನದಿ ದಡದಲ್ಲಿ ಉರುಳಿ ಬಿತ್ತಾದರೂ ಅದರಲ್ಲಿದ್ದ ಜನ ಬಿದ್ದ ರಭಸಕ್ಕೆ ನದಿ ನೀರಿನಲ್ಲಿ ಬಿದ್ದರು ಎಂದು ಮೂಲಗಳು ತಿಳಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ