*ನಟ ದರ್ಶನ್ ಖ್ಯಾತಿ ಪಡೆದಿರುವ ಕಾರಣ ಸಾಕಷ್ಟು ನಟರು ಸಂಪರ್ಕದಲ್ಲಿರುತ್ತಾರೆ: ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಖ್ಯಾತಿ ಪಡೆದಿರುವ ಕಾರಣ ಸಾಕಷ್ಟು ಮಂದಿ ನಟರು ಸಂಪರ್ಕದಲ್ಲಿರುತ್ತಾರೆ. ಹಾಗೆಂದು ಹತ್ಯೆ ಪ್ರಕರಣದಲ್ಲಿ ಎಲ್ಲರನ್ನೂ ತನಿಖೆಗೆ ಒಳಪಡಿಸಲಾಗುತ್ತದೆ ಎಂದಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾಕ್ಷ್ಯಗಳ ಆಧಾರದ ಮೇರೆಗೆ ಸಂಬಂಧಿತ ನಟರನ್ನು ಕರೆಸುವ ಅನಿವಾರ್ಯತೆ ಇದ್ದರೆ ಆ ಬಗ್ಗೆ ಪರಿಶೀಲಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.
ಪಿಎಸ್ಐ ನೇಮಕಾತಿ ಪ್ರಕ್ರಿಯೆಯು ಅಂತಿಮ ಹಂತದಲ್ಲಿದ್ದು, ಈ ವಾರ ಇಲ್ಲವೇ ಮುಂದಿನ ವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಇನ್ನು ತೈಲ ದರ ಏರಿಕೆ ಖಂಡಿಸಿ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿರುವ ಕುರಿತು ಮಾತನಾಡಿ, ಬಿಜೆಪಿಯವರು ಎಲ್ಲಾ ವಿಚಾರಗಳಲ್ಲೂ ರಾಜಕಾರಣ ಮಾಡುತ್ತಾರೆ. ಕಚ್ಚಾ ತೈಲ ಬೆಲೆ ಕಡಿಮೆ ಇದ್ದಾಗಲೂ ಅವರು ೧೪ ಬಾರಿ ಟೈಲ್ ಬೆಲೆ ಹೆಚ್ಚಿಸಿದರು. ಈಗ ನಾವು ಒಮ್ಮೆ ಹೆಚ್ಚಳ ಮಾಡಿರುವುದಕ್ಕೆ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟಿಸುವ ಹಕ್ಕು ಅವರಿಗಿದ್ದು, ಮಾಡಲಿ ಎಂದಿದ್ದಾರೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ