Kannada NewsKarnataka NewsLatestPolitics
*ಗೃಹಲಕ್ಷ್ಮೀ ಯೋಜನೆಗೆ ಜೂನ್ 27ರ ನಂತರ ಅರ್ಜಿ ಸಲ್ಲಿಕೆ ಆರಂಭ; ಆಪ್ ಕೂಡ ರೆಡಿಯಾಗಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಗೃಹಲಕ್ಷ್ಮೀ ಯೋಜನೆಗೆ ಜೂನ್ 27ರ ನಂತರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಆಪ್ ತಯಾರಾಗಿದೆ. ಯೋಜನೆ ವಿಳಂಬವಾಗಿಲ್ಲ. ಯೋಜನೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೆವೆ ಎಂದು ಹೇಳಿದರು.
ಜೂನ್ 27ರ ನಂತರ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಅರ್ಜಿ ಸಲ್ಲಿಕೆಗೆ ಹಣ ಪಾವತಿ ಮಾಡುವಂತಿಲ್ಲ, ಮಧ್ಯವರ್ತಿಗಳೂ ಇರುವುದಿಲ್ಲ. ಆಗಸ್ಟ್ 16 ಅಥವಾ 17ಕ್ಕೆ ಮನೆ ಯಜಮಾನಿ ಖಾತೆಗೆ ಹಣ ತಲುಪುತ್ತದೆ ಎಂದು ತಿಳಿಸಿದರು.