Belagavi NewsBelgaum NewsKannada NewsKarnataka News

ಪಿಎಸ್ಐ ಕಿರುಕುಳ ನೀಡಿದ್ದಾರೆ ಎಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಪ್ರಗತಿವಾಹಿನಿ ಸುದ್ದಿ: ಪಿಎಸ್ ಐ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವ್ಯಕ್ತಿಓರ್ವ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರು ಘಟನೆ ಬೆಳಕಿಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲೂಕಿನ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.‌ ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದರು ಎನ್ನಲಾಗಿದೆ.‌ ಭಾಸ್ಕರ್ ಅವರನ್ನು ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.‌

Home add -Advt

ಜೂಜಾಟ ಆರೋಪದಡಿ ಭಾಸ್ಕರ್ ವಿರುದ್ಧ ರಾಮನಗರ ಪೊಲೀಸ್ ಠಾಣೆಯ ಪಿಎಸ್ ಐ ಬಸವರಾಜ್ ಮಗನೂರು ಪ್ರಕರಣ ದಾಖಲಿಸಿದ್ದರು. ನಿನ್ನೆ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್ ಮದ್ಯ ಸೇವಿಸಿ ಬೈಕ್ ಮೂಲಕ ಠಾಣೆಗೆ ತೆರಳಿದ್ದಾನೆ. ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ ಐ ಬಸವರಾಜ್ ಸೂಚಿಸಿದ್ದಾರೆ. ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿ ನಲ್ಲಿ ಭಾಸ್ಕರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Related Articles

Back to top button