Kannada NewsKarnataka News

ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿ ಚಾಕು ಇರಿದ ವ್ಯಕ್ತಿ

ಪ್ರಗತಿವಾಹಿನಿ ಸುದ್ದಿ: ವಿವಾಹಿತೆ ಮಹಿಳೆ  ಮೇಲೆ ವ್ಯಕ್ತಿ ಅತ್ಯಾಚಾರಕ್ಕೆ ಪ್ರಯತ್ನಿಸಿ ಚಾಕು ಇರಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮನಟ್ಟಿ ಗ್ರಾಮದ ಗೊಲ್ಲರಟ್ಟಿಯಲ್ಲಿ ನಡೆದಿದೆ.

ಆರೋಪಿ ಕಾಟಪ್ಪ ನಿನ್ನೆ ರಾತ್ರಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಷ್ಟರಲ್ಲಿ ಮಹಿಳೆ ಪ್ರತಿರೋಧವೊಡ್ಡಿ ಜೋರಾಗಿ ಕೂಗಿಕೊಂಡಿದ್ದಾರೆ. ಗ್ರಾಮಸ್ಥರಿಗೆ ವಿಚಾರ ಗೊತ್ತಾಗುತ್ತದೆ ಎಂದು ತಿಳಿದ ಆರೋಪಿ ಮಹಿಳೆಯ ಕುತ್ತಿಗೆ ಸೇರಿದಂತೆ ಮೂರು ಕಡೆ ಚಾಕುವಿನಿಂದ ಇರಿದಿದ್ದಾನೆ.

Home add -Advt

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಟಪ್ಪ (30) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ.

ಗ್ರಾಮಸ್ಥರೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಚಾರ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಜಗಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Related Articles

Back to top button