Kannada NewsKarnataka NewsLatest

*ಪ್ರಿಯಕರನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆ* 

ಪ್ರಗತಿವಾಹಿನಿ ಸುದ್ದಿ: ಒಂದೇ ಮರಕ್ಕೆ ನೇಣು ಹಾಕಿಕೊಂಡು ಪ್ರೇಮಿಗಳು  ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.‌

ನರೇಗಲ್ ಪಟ್ಟಣದ ಅಪ್ಪಣ್ಣ ಗೊರಕಿ(28), ಲಲಿತಾ ಹಲಗೇರಿ (21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. 

ಒಂದೇ ಗ್ರಾಮದವರಾದ ಅಪ್ಪಣ್ಣ ಗೊರಕಿ ಹಾಗೂ ಲಲಿತಾ ನಡುವೆ ಪ್ರೀತಿ ಇತ್ತು. ಅವರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ ಎಂದು ತಿಳಿದು ಬಂದಿದೆ. ಈ ಮಧ್ಯೆ ಮನೆಯವರ ಬಲವಂತಕ್ಕೆ ಲಲಿತಾ ಇದೇ ಏಪ್ರಿಲ್ 4 ರಂದು ಬೇರೆ ಯುವಕನೊಂದಿಗೆ ಮದುವೆಯಾಗಿದ್ದಳು.

Home add -Advt

ಇದರಿಂದ ಅಪ್ಪಣ್ಣ-ಲಲಿತಾ ಇಬ್ಬರು ಮನ ನೊಂದಿದ್ದರು. ಬೇರೊಬ್ಬನ ಜೊತೆಗೆ ಮದುವೆ ಆಗಿದ್ದರೂ, ಮನಸ್ಸೆಲ್ಲವೂ ಅಪ್ಪಣ್ಣನೊಂದಿಗೆ ಬೆರೆತು ಹೋಗಿತ್ತು. ಅಪ್ಪಣ್ಣ ಹಾಗೂ ಲಲಿತಾ ಒಬ್ಬರನ್ನೊಬ್ಬರು ಬಿಟ್ಟು ಇರಲು ಆಗದೆ ಊರಿನ ಹೊರವಲಯದ ಖಾಲಿ ಜಾಗದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button